ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವ
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವ (Nandini Sweets) ಆಯೋಜಿಸಲಾಗಿದೆ. ಈ ಅವಧಿಯಲ್ಲಿ ನಂದಿನಿ ಸಿಹಿ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಇವತ್ತು ಶಿಮುಲ್ ಅಧ್ಯಕ್ಷ ಶ್ರೀಪಾದ ರಾವ್ ಅವರು ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದರು. ಶಿಮುಲ್ ನಿರ್ದೇಶಕ ಡಿ.ಆನಂದ್, ದಿನೇಶ್, ಎಂಡಿ ಶೇಖರ್ ಮತ್ತು ಸಿಬ್ಬಂದಿ ಹಾಜರಿದ್ದರು.
Copy and paste this URL into your WordPress site to embed
Copy and paste this code into your site to embed